ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ಗಾಯತ್ರಿ ಪಿ. ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ 2024-25 ರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 45 ವರ್ಷದ ಒಳಗಿನ ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ, ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನ, ಕಲಾತ್ಮಕ ತಂಡ ಯೋಗಾಸನದಲ್ಲಿ ಪ್ರಥಮ ಸ್ಥಾನ ಹಾಗೂ ಸಂಯೋಜನೆ ವೈಯಕ್ತಿಕ ಯೋಗಾಸನದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
