April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

ಮರೋಡಿ: ನಿನ್ನೆ ಸುರಿದ ಸಿಡಿಲು ಸಹಿತ ಭಾರಿ ಗಾಳಿ ಮಳೆಗೆ ಬೃಹತ್‌ ಗಾತ್ರದ ಮರವೊಂದು ಮನೆ ಮೇಲೆ ಬಿದ್ದು ಮನೆಗೆ ಸಂಪೂರ್ಣ ಹಾನಿಯಾದ ಘಟನೆ ಮರೋಡಿಯಲ್ಲಿ ನಡೆದಿದೆ.

ನಿನ್ನೆ ಸಂಜೆ ಸಮಯಕ್ಕೆ ತಾಲೂಕಿನಾದ್ಯಂತ ಗಾಳಿ ಮಳೆಯಾಗಿದೆ. ಮರೋಡಿಯಲ್ಲಿಯೂ ಮಳೆಯ ಪ್ರಮಾಣ ಜೋರಾಗಿತ್ತು. ಸಂಜೆ 6.30ಕ್ಕೆ ಸುರಿದ ಜೋರಾದ ಮಳೆಗೆ ಬೃಹತ್‌ ಗಾತ್ರದ ಮರ ಬುಡ ಸಮೇತ ಸಂತೋಷ್ ದೇವಾಡಿಗರವರ ಮನೆಯ ಮೇಲೆ ಉರುಳಿ ಬಿದ್ದಿದೆ. ಮನೆಯಲ್ಲಿ ಸಂತೋಷ ದೇವಾಡಿಗ ಅವರ ತಾಯಿ ಲಲಿತಾ, ತಮ್ಮ ಸಂದೀಪ್ ದೇವಾಡಿಗ, ತಮ್ಮನ ಪತ್ನಿ ರಜನಿ, ಸಣ್ಣ ಪ್ರಾಯದ ಮಗು ಮನೆಯೊಳಗೆ ಇದ್ದರು. ಜೋರಾದ ಶಬ್ದ ಬಂದಾಗ ಎಲ್ಲರೂ ಮನೆಯ ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮನೆಯ ಹಂಚು, ಶೀಟ್, ಅಡುಗೆ ಪಾತ್ರೆ, ಟಿವಿ, ಕಿಟಕಿ, ದಾರಂದ, ವಿದ್ಯುತ್ ಉಪಕರಣಗಳು ಎಲ್ಲವೂ ಹಾನಿಗೊಳಗಾಗಿದೆ.ಲಕ್ಷಾಂತರ ರೂ ನಷ್ಟ ಸಂಭವಿಸಬಹುದೆಂದು ತಿಳಿದು ಬಂದಿದೆ.

ಮಾಹಿತಿ ತಿಳಿದ ತಕ್ಷಣ ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಕಂದಾಯ ಇಲಾಖಾ ಅಧಿಕಾರಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ಸ್ಥಳೀಯರಾದ ಸೂರಾಜ್ ಅವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ.

Related posts

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya
error: Content is protected !!