
ಬೆಳ್ತಂಗಡಿ: ತಣ್ಣೀರುಪಂತ ಗ್ರಾಮದ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ ಮಾ.13 ಮತ್ತು ಮಾ.14ರಂದು ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಮಾ.13 ರಂದು ಬೆಳಗ್ಗೆ ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ ನಾಗದೇವರಿಗೆ ಆಶ್ಲೇಷಾಬಲಿ, ತಂಬಿಲ, ದೈವಗಳಿಗೆ ತಂಬಿಲ ಸೇವೆ, ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು. ಸಂಜೆ ಉಡುಪಿಯ ಶೀರೂರು ವಾಮನತೀರ್ಥ ಸಂಸ್ಥಾನದ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಕಲ್ಲಡ್ಕ ವಿಠಲ್ ನಾಯಕ್ ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ, ದುರ್ಗಾಪೂಜೆ, ರಂಗ ಪೂಜೆ, ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ ನಡೆಯಿತು.

ಇಂದು (ಮಾ.14) ಬೆಳಗ್ಗೆ ಗಣಪತಿಹೋಮ, ದೇವರ ಬಲಿ ಹೊರಟು ಉತ್ಸವ ನಡೆಯಿತು. ದೇವರ ದರ್ಶನಬಲಿ ಹಾಗೂ ಬಟ್ಟಲು ಕಾಣಿಕೆ, ಕಲಶಾಭಿಷೇಕ, ಮಹಾಪೂಜೆ, ಪಲ್ಲಪೂಜೆ ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಗೌರವಾಧ್ಯಕ್ಷರು, ಅರ್ಚಕರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭರತ್ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು , ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ಸಂಜೆ ಕ್ಷೇತ್ರದ ದೈವಗಳಿಗೆ ನೇಮೋತ್ಸವ ನಡೆಯಲಿದೆ.