38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

ಉರುವಾಲು: ಗೋಕರ್ಣ ಮಂಡಲಾಧೀಶ್ವರ ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳವರ ಸಂಕಲ್ಪದಂತೆ ಅದ್ವೈತ ರಥ ಯಾತ್ರೆ – ಶ್ರೀ ಮಹಾ ಪಾದುಕಾ ಸಂಚಾರ ಗೋಕರ್ಣ ಮಂಡಲಾದ್ಯಂತ ಸಂಚರಿಸುತ್ತಿದ್ದು, ಉರುವಾಲಿನಲ್ಲಿರುವ ಶ್ರೀ ಭಾರತೀ ವಿದ್ಯಾ ಸಂಸ್ಥೆಗೆ ಆಗಮಿಸಿತು.

ವಿದ್ಯಾರ್ಥಿಗಳ ಬ್ಯಾಂಡ್ ವಾದ್ಯ ಜೊತೆಯಲ್ಲಿ ಮಾತೆಯರ ಹಾಗೂ ವಿದ್ಯಾರ್ಥಿನಿಯರ ಪೂರ್ಣ ಕುಂಭದೊಂದಿಗೆ ಅದ್ವೈತ ರಥ ವನ್ನು ಸ್ವಾಗತಿಸಲಾಯಿತು.

ಈಶ್ವರ ಪ್ರಸನ್ನ ಪರ್ನೆಕೋಡಿ , ಅಧ್ಯಕ್ಷರು ಉಪ್ಪಿನಂಗಡಿ ಮಂಡಲ ಇವರು ಪ್ರಾಸ್ತಾವಿಕ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಆಗಮಿಸಿದ ಪದ್ಮುಂಜ ಪ.ಪೂ. ಕಾಲೇಜು ನಿವೃತ್ತ ಪ್ರಾಂಶುಪಾಲರು ಮಹಾಲಿಂಗೇಶ್ವರ ಭಟ್ ಶಂಕರಾಚಾರ್ಯರ ಕುರಿತಾಗಿ ಸಾಕಷ್ಟು ಮಾಹಿತಿಗಳನ್ನು ನೀಡಿದರು.

ವಿಶೇಷ ಅತಿಥಿಗಳಿಗೆ ಶಾಲಾ ವತಿಯಿಂದ ಸ್ಮರಣಿಕೆ ನೀಡಲಾಯಿತು. ಶಾಲಾ ಸೇವಾ ಸಮಿತಿಯ ಮಾಜಿ ಅಧ್ಯಕ್ಷ ದಿವಾಕರ ಶಾಸ್ತ್ರೀ ಸ್ವಾಗತಿಸಿದರು .ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಸೇವಾ ಸಮಿತಿಯ ಸದಸ್ಯ ಸತ್ಯ ಶಂಕರ ಭಟ್ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ಸೇವಾ ಸಮಿತಿಯ ಸರ್ವ ಸದಸ್ಯರು, ರಕ್ಷಕ ಶಿಕ್ಷಕ ಸಂಘದ ಸರ್ವ ಸದಸ್ಯರು, ಪೋಷಕರು, ಹಿತೈಷಿಗಳು , ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೆ ಪಾತ್ರರಾದರು.

Related posts

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

Suddi Udaya

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya
error: Content is protected !!