ವೇಣೂರು : 32ನೇ ವರ್ಷದ ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಕಂಬಳವು ಮಾ.30 ರಂದು ನಡೆಯಲಿದ್ದು, ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಂಬಳ ಸಮಿತಿಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಕಂಬಳ ಸಮಿತಿಯ ಗೌರವಾಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ, ಕಂಬಳದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು.
ಈ ಸಂದರ್ಭದಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ಪ್ರಧಾನ ಕಾರ್ಯದರ್ಶಿ ಭರತರಾಜ್ ಜೈನ್ ಪಾಪುದಡ್ಕಗುತ್ತು, ಕೋಶಾಧಿಕಾರಿ ಅಶೋಕ್ ಪಾಣೂರು, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ಶೆಟ್ಟಿ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಹಾಗೂ ಕಂಬಳ ಸಮಿತಿಯ ಪದಾಧಿಕಾರಿಗಳು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.