23 C
ಪುತ್ತೂರು, ಬೆಳ್ತಂಗಡಿ
March 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷ,ನಿವೃತ್ತ ಡಿಎಫ್‌ಓ, ಅದಮ್ಯ ಚೇತನ ಅಮರತ್ವದೆಡೆಗೆ ದಿ. ಎನ್.ಪದ್ಮನಾಭ ಮಾಣಿಂಜರವರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ ಶ್ರದ್ಧಾಂಜಲಿ ಕಾರ್ಯಕ್ರಮ ಮಾ.15 ರಂದು ಬೆಳ್ತಂಗಡಿ ಶ್ರೀಗುರು ಸಾನಿಧ್ಯ ಸಭಾಭವನದಲ್ಲಿ ನಡೆಯಿತು.

ಬೆಂಗಳೂರು ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆರ್ಶೀವಚನ ನೀಡಿ ನಿರಂತರ ಉನ್ನತಿ ಹಾಗೂ ಒಳಿತಿನ ಚಿಂತನೆ ಮಾಡುವ ಮನಸ್ಸು ಪದ್ಮನಾಭರವರು.ಸಮಾಜದ ಬಗ್ಗೆ ಕಾಳಜಿ,ಹಿತ ಚಿಂತನೆ ಮಾಡಿದ ನಿಜವಾದ ರಾಜರ್ಷಿ ಪದ್ಮನಾಭರವರು ಎಂದು ನುಡಿದರು.

ಸಂಘದ ಉಪಾಧ್ಯಕ್ಷ ಭಗೀರಥ ಜಿ. ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ, ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಉಜಿರೆಯ ಅಧ್ಯಕ್ಷ ಶ್ರೀಧರ ಜಿ.ಭಿಡೆ, ಹಿರಿಯ ಪುತ್ರ ಸುಧೀರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಸುಜಿತಾ ವಿ ಬಂಗೇರ, ಕೆ.ಪಿ.ದಿವಾಕರ, ಧರ್ಣಪ್ಪ ಪೂಜಾರಿ, ಡಾ.ರಾಜರಾಮ ಕೆ.ಬಿ, ತನುಜಾ ಶೇಖರ್, ಧರಣೇಂದ್ರ ಕುಮಾರ್, ಚಿದಾನಂದ ಪೂಜಾರಿ ಎಲ್ದಕ, ಸಂಜೀವ ಪೂಜಾರಿ, ಚಂದ್ರಶೇಖರ್, ಗಂಗಾಧರ ಮಿತ್ತಮಾರು, ಜಯವಿಕ್ರಮ ಕಲ್ಲಾಪು, ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆತ್ಯಾರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕ ಜಗದೀಶ್ಚಂದ್ರ ಡಿ.ಕೆ. ಪ್ರಾಸ್ತಾವಿಕ ನುಡಿಗಳನ್ನಾಡಿ, ಸ್ವಾಗತಿಸಿದರು, ಪ್ರದೀಶ್ ನಡುವಾಲು ಕಾರ್ಯಕ್ರಮ ನಿರೂಪಿಸಿದರು, ನಿರ್ದೇಶಕ ಆನಂದ ಪೂಜಾರಿ ಸರ್ವೇದೋಳ ವಂದಿಸಿದರು. ಹಾಗೂ ಸಂಘದ ಸಿಬ್ಬಂದಿ ವರ್ಗ ಸಹಕರಿಸಿದರು.

ಕಾರ್ಯಕ್ರಮದಲ್ಲಿ ವಿವಿದ್ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya

ಕು.ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

Suddi Udaya

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya
error: Content is protected !!