25.4 C
ಪುತ್ತೂರು, ಬೆಳ್ತಂಗಡಿ
May 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬಂದಾರು: ಎಸ್. ಡಿ. ಎಮ್. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಉಜಿರೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ, ಅಮೃತ ಮಹೋತ್ಸವ ಸಮಿತಿ ಮತ್ತು ಹಳೆ ವಿದ್ಯಾರ್ಥಿ ಸಂಘ ಮೈರೋಳ್ತಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿಬಂಧು ಒಕ್ಕೂಟ ಮೈರೋಳ್ತಡ್ಕ ಇದರ ಸಹಯೋಗದಲ್ಲಿ ಮಾ. 16 ರಂದು ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬೃಹತ್ ಅರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ ಕೆ ಸಾಹುಲ್ ಹಮೀದ್ ರವರು ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ. ಪ್ರಮುಖ ಗಣ್ಯರು ಆಗಮಿಸಲಿದ್ದಾರೆ. ಶಿಬಿರದಲ್ಲಿ ಮೂಳೆ ಶಸ್ತ್ರಚಿಕಿತ್ಸಾ ತಜ್ಞರು, ಕಣ್ಣಿನ ತಜ್ಞರು, ಚರ್ಮರೋಗ ತಜ್ಞರು, ಸ್ತ್ರೀ ರೋಗ ತಜ್ಞರು, ಕಿವಿ -ಮೂಗು -ಗಂಟಲು ತಜ್ಞರು, ಮಕ್ಕಳ ರೋಗ ತಜ್ಞರು, ಮೆಡಿಸಿನ್ ವಿಭಾಗ ತಜ್ಞರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಸಿಯೋನ್ ಆಶ್ರಮ : ಮಾನಸಿಕ ಅಸ್ವಸ್ಥತೆಯಿಂದ ಚೇತರಿಸಿಕೊಂಡು ಮನೆ ಸೇರಿದ ಸಂದೀಪ್ ಪರಹೈ

Suddi Udaya
error: Content is protected !!