ಮೇಲ0ತಬೆಟ್ಟು: ಮೇಲಂತಬೆಟ್ಟುಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸವಿತಾ ರವರ ಅಧ್ಯಕ್ಷತೆಯಲ್ಲಿ ಮಾ.15ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.
ಮಾರ್ಗದರ್ಶಕ ಅಧಿಕಾರಿಯಾಗಿ ಶಿಶು ಅಭಿವೃದ್ಧಿ ಇಲಾಖೆಯ ಶ್ರೀಮತಿ ವಾಣಿಶ್ರೀ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.
ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ಮೇಲಂತಬೆಟ್ಟು ಆರೋಗ್ಯ ಮತ್ತು ಕ್ಷೇಮ ಕೇಂದ್ರ-ಉಪಕೇಂದ್ರದ ವತಿಯಿಂದ ಉಚಿತ ಅಸಾಂಕ್ರಾಮಿಕ ರೋಗಗಳ (ಎನ್.ಸಿ.ಡಿ) ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ಚಂದ್ರರಾಜ್ ಎಂ., ವೇಣುಗೋಪಾಲ ಶೆಟ್ಟಿ, ಶ್ರೀಮತಿ ದೀಪಿಕಾ, ಶ್ರೀಮತಿ ಹರೀಣಾಕ್ಷಿ, ಸಂತೋಷ್ ಕುಮಾರ್, ಚಂದ್ರಶೇಖರ್, ಪ್ರಭಾಕರ ಆಚಾರ್ಯ, ಶ್ರೀಮತಿ ಶಶಿಕಲಾ, ಶ್ರೀಮತಿ ಜಯಲಕ್ಷ್ಮೀ, ಶ್ರೀಮತಿ ಸುಮಲತಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಸ್ವಾಗತಿಸಿದರು. ಪಂಚಾಯತ್ ಕಾರ್ಯದರ್ಶಿ ಹಾಗೂ ಪ್ರಭಾರ ಅಭಿವೃದ್ಧಿ ಅಧಿಕಾರಿ ನಿರ್ಮಲ್ ಕುಮಾರ್ ಜಮಾ ಖರ್ಚು ವರದಿ ವಾಚಿಸಿ, ವಂದಿಸಿದರು.