ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ ಮಾ.14 ರಂದು ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಇಂದಬೆಟ್ಟು ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಸಂಯೋಜಕರು ಜೋಸೆಫ್ ಇವರು ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಪಂಚಾಯತ್ ನಿಂದ ಸಿಗುವ ಸೌಲಭ್ಯಗಳ ಬಗ್ಗೆ ಪಂಚಾಯತ್ ಉಪಾಧ್ಯಕ್ಷ ಪಿ.ಶ್ರೀನಿವಾಸ್ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ವಿಮಲ , ಪಂಚಾಯತ್ ಅಭಿವೃದ್ದಿ ಅಧಿಕಾರಿ ದಿನೇಶ್ ಎಂ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
48 ವಿಶೇಷಚೇತನರಿಗೆ ವೈದ್ಯಕೀಯ ಚಿಕಿತ್ಸಾ ವೆಚ್ಚ ಧನ ಸಹಾಯವನ್ನು ವಿತರಿಸಲಾಯಿತು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹರೀಶ್ ಇವರು ಕಾರ್ಯಕ್ರಮವನ್ನು ನಿರ್ವಹಣೆ ಮಾಡಿದರು.