March 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

ಬೆಳಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಕುಕ್ಕೊಟ್ಟು ನಿವಾಸಿ ಮುತ್ತಪ್ಪ ನಾಯ್ಕ್ ರವರಿಗೆ ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಕಮೋಡ್ ವೀಲ್‌ಚೇರ್‌ಗೆ ಬೇಡಿಕೆ ನೀಡಿದ್ದರು. ಈ ಬೇಡಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿಯವರು ಮಂಜೂರು ಮಾಡಿದ್ದು, ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ವೀಲ್‌ಚೇರ್ ವಿತರಿಸಿದರು.

ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿಧಿ ಪ್ರಮೀಳಾ, ಸೇವಾಪ್ರತಿನಿಧಿ ತಾರನಾಥ, ಬೆಳಾಲು ಒಕ್ಕೂಟದ ಉಪಾಧ್ಯಕ್ಷ ಪ್ರಸಾದ್, ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಸುಕೇಶ್ ಗೌಡ, ಮುತ್ತಪ್ಪ ನಾಯ್ಕ್ ರವರ ಪುತ್ರ ಜಯ, ಪೆರ್ಲ ಬೈಪಾಡಿ ಒಕ್ಕೂಟದ ಪದಾಧಿಕಾರಿಗಳಾದ ದಿನೇಶ್ ಅಡ್ಡಾರು, ಶೀನಪ್ಪ ಫಲಸದಕೋಡಿ ಉಪಸ್ಥಿತರಿದ್ದರು.

Related posts

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

Suddi Udaya

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya
error: Content is protected !!