ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಇದರ ಎನ್‌ಎಸ್‌ಎಸ್ ಘಟಕ ಹಾಗೂ ಯುವ ರೆಡ್‌ಕ್ರಾಸ್ ಘಟಕದ ಪ್ರಾಯೋಜಕತ್ವದಲ್ಲಿ ರೋಟರಿ ಕ್ಲಬ್, ಬೆಳ್ತಂಗಡಿ ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್, ಪುತ್ತೂರು ಇವುಗಳ ಸಹಭಾಗಿತ್ವದೊಂದಿಗೆ ರಕ್ತದಾನ ಶಿಬಿರವನ್ನು ಕಾಲೇಜಿನಲ್ಲಿ ಮಾ.15ರಂದು ಆಯೋಜಿಸಲಾಗಿತ್ತು .
ಉದ್ಯಮಿ ಹಾಗೂ ರೋಟರಿ ಕ್ಲಬ್, ಬೆಳ್ತಂಗಡಿ ಕಾರ್ಯದರ್ಶಿ ಸಂದೇಶ್ ರಾವ್ ಶಿಬಿರವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸಂತೋಷ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ರೋಟರಿ ಕ್ಯಾಂಪ್ಲೋ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಹಿರಿಯ ವೈದ್ಯಾಧಿಕಾರಿ ಡಾ| ರಾಮಚಂದ್ರ ಭಟ್ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಸದಸ್ಯ ಪ್ರವೀಣ್ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ., ಎನ್‌ಎಸ್‌ಎಸ್ ಘಟಕದ ಯೋಜನಾಧಿಕಾರಿ ಪ್ರಕಾಶ್ ಮತ್ತು ಎನ್ ಎಸ್‌ಎಸ್‌ನ ಉಪ ಯೋಜನಾಧಿಕಾರಿಗಳಾದ ಪುಷ್ಪಲತಾ ಪಿ ಮತ್ತು ಲೋಹಿತ್ ಉಪಸ್ಥಿತರಿದ್ದರು.
ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ರಕ್ತದಾನ ಶಿಬಿರದಲ್ಲಿ ಒಟ್ಟು 53 ಯೂನಿಟ್ ರಕ್ತ ಸಂಗ್ರಹಿಸಲಾಯಿತು.