ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಇದರ ಎನ್‌ಎಸ್‌ಎಸ್ ಘಟಕ ಹಾಗೂ ಯುವ ರೆಡ್‌ಕ್ರಾಸ್ ಘಟಕದ ಪ್ರಾಯೋಜಕತ್ವದಲ್ಲಿ ರೋಟರಿ ಕ್ಲಬ್, ಬೆಳ್ತಂಗಡಿ ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್, ಪುತ್ತೂರು ಇವುಗಳ ಸಹಭಾಗಿತ್ವದೊಂದಿಗೆ ರಕ್ತದಾನ ಶಿಬಿರವನ್ನು ಕಾಲೇಜಿನಲ್ಲಿ ಮಾ.15ರಂದು ಆಯೋಜಿಸಲಾಗಿತ್ತು .

ಉದ್ಯಮಿ ಹಾಗೂ ರೋಟರಿ ಕ್ಲಬ್, ಬೆಳ್ತಂಗಡಿ ಕಾರ್ಯದರ್ಶಿ ಸಂದೇಶ್ ರಾವ್ ಶಿಬಿರವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸಂತೋಷ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ರೋಟರಿ ಕ್ಯಾಂಪ್ಲೋ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಹಿರಿಯ ವೈದ್ಯಾಧಿಕಾರಿ ಡಾ| ರಾಮಚಂದ್ರ ಭಟ್ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಸದಸ್ಯ ಪ್ರವೀಣ್ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ., ಎನ್‌ಎಸ್‌ಎಸ್ ಘಟಕದ ಯೋಜನಾಧಿಕಾರಿ ಪ್ರಕಾಶ್ ಮತ್ತು ಎನ್ ಎಸ್‌ಎಸ್‌ನ ಉಪ ಯೋಜನಾಧಿಕಾರಿಗಳಾದ ಪುಷ್ಪಲತಾ ಪಿ ಮತ್ತು ಲೋಹಿತ್ ಉಪಸ್ಥಿತರಿದ್ದರು.

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ರಕ್ತದಾನ ಶಿಬಿರದಲ್ಲಿ ಒಟ್ಟು 53 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

Related posts

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಬೆಳಾಲು ಶ್ರೀ ಧ. ಮಂ. ಅ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಮತ್ತು ವಿದ್ಯಾರ್ಥಿಗಳಿಗೆ ಶಾಲಾ ಸೌಲಭ್ಯಗಳ ವಿತರಣೆ

Suddi Udaya

ವಿದ್ವತ್ ಕಾಲೇಜು: ದ್ವಿತೀಯ ಪಿಯು ವಿದ್ಯಾರ್ಥಿಗಳು, ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

Suddi Udaya
error: Content is protected !!