ಗರ್ಡಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಗರ್ಡಾಡಿ ವಲಯದ ಗರ್ಡಾಡಿ ಕಾರ್ಯಕ್ಷೇತ್ರದ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಲಲಿತ ವಹಿಸಿದ್ದರು.

ತಾಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿ ಮಾತನಾಡಿ ಹೇಮಾವತಿ ವೀ. ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಪ್ರಾರಂಭವಾಗಿರುವ ಜ್ಞಾನವಿಕಾಸ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿ ಶ್ರೀಮತಿ ಉಷಾ ವಿ. ನಾಯಕ್ ಸ್ವ ಉದ್ಯೋಗದ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಸದಸ್ಯರಿಗೆ ಆಟೋಟ ಸ್ಪರ್ಧೆ ನಡೆಸಿ ಬಹುಮಾನ ವಿತರಣೆ, ಕೇಂದ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ವಲಯ ಮೇಲ್ವಿಚಾರಕಿ ಹೇಮಾವತಿ, ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಸೇವಾಪ್ರತಿನಿಧಿ ಹೇಮಾ ಹಾಗೂ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.
ಕೇಂದ್ರದ ಸಂಯೋಜಕಿ ಶ್ರೀಮತಿ ವಸಂತಿ ಕಾರ್ಯಕ್ರಮ ನಿರೂಪಿಸಿದರು.