ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ರಬೈಲು ಬಳಿ ದ.ಕ‌. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಹಾಗೂ ಗ್ರಾಮ‌ ಪಂಚಾಯತ್ ಸಹಕಾರದಲ್ಲಿ ನಿರ್ಮಾಣಗೊಂಡ ನೂತನ ಗ್ರಂಥಾಲಯವನ್ನು ತಾ.ಪಂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಉದ್ಘಾಟಿಸಿ ಗ್ರಂಥಾಲಯಗಳಿಗೆ ಸಾರ್ವಜನಿಕರು, ಭೇಟಿ ನೀಡುವ ಮೂಲಕ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು.

ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ, ಪಿಡಿಒ ಶ್ರೀನಿವಾಸ್, ಸ್ಥಳೀಯರಾದ ಸುಂದರ್, ಸೇರಿದಂತೆ ಅನೇಕರು ಅನಿಸಿಕೆ ಹಂಚಿಕೊಂಡರು, ಗ್ರಂಥಾಲಯ ಉದ್ಘಾಟನೆ ವೇಳೆ ಪಟಾಕಿ ಸಿಡಿಸಿ ಸ್ಥಳೀಯರು ಸಂಭ್ರಮಿಸಿದರು. ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ.ಕೆ. ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಸದಸ್ಯರುಗಳಾದ ದಿನೇಶ್ ಶೆಟ್ಟಿ, ಗಣೇಶ್ ಆರ್, ಆಶಾಲತಾ ಪ್ರಶಾಂತ್, ಮೋಹನದಾಸ್ , ಸ್ಥಳೀಯರಾದ ಸುರೇಶ್ ಬೈರ, ಜಗನ್ನಾಥ್ ಲಾಯಿಲ, ರಮೇಶ್ ಆರ್, ರಾಜೇಶ್ ಶೆಟ್ಟಿ ಗಣೇಶ್ ಗ್ಯಾರೇಜ್, ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯದರ್ಶಿ ತಾರನಾಥ್ ಸ್ವಾಗತಿಸಿ, ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ ಧನ್ಯವಾದವಿತ್ತರು.

Related posts

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ಕುವೆಟ್ಟು: ಪಿಲಿಚಂಡಿಕಲ್ಲು ಸಮೀಪ ವರಕಬೆಯಲ್ಲಿ ರಸ್ತೆ ಅಪಘಾತ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya
error: Content is protected !!