22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಶಿರ್ಲಾಲು: ಇಲ್ಲಿಯ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಉಷಾ ರವರ ಅಧ್ಯಕ್ಷತೆಯಲ್ಲಿ ಮಾ.17ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಜಗದೀಪ್ ಜೆ. ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಉಪಾಧ್ಯಕ್ಷ ಸೋಮನಾಥ ಬಂಗೇರ, ಗ್ರಾ.ಪಂ. ಸದಸ್ಯರಾದ ತಾರಾನಾಥ ಗೌಡ, ಕೊರಗಪ್ಪ, ಮಾಧವ, ಶ್ರೀಮತಿ ಜ್ಯೋತಿ ಪೂಜಾರಿ, ಶ್ರೀಮತಿ ಮಮತಾ ಜೈನ್, ಶ್ರೀಮತಿ ಗೀತಾ, ಶ್ರೀಮತಿ ಸುಶೀಲಾ, ಪ್ರಕಾಶ್ ಹೆಗ್ಡೆ, ಶ್ರೀಮತಿ ಗೀತಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಶೀಲಾ ಸ್ವಾಗತಿಸಿ, ಅನುಪಾಲನ ವರದಿ ವಾಚಿಸಿದರು. ಕಾರ್ಯದರ್ಶಿ ಶ್ರೀಮತಿ ಮೋನಮ್ಮ ಜಮಾ ಖರ್ಚು ವಿವರ ವಾಚಿಸಿದರು. ಸಿಬ್ಬಂದಿಗಳಾದ ಸರೋಜಿನಿ ಎಚ್. ವಾರ್ಡ್ ಸಭೆಯ ಬೇಡಿಕೆ, ಪವಿತಾ ಧನ್ಯವಾದವಿತ್ತರು.

Related posts

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಮೋಹಿತ್ ತೃತೀಯ ಸ್ಥಾನ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya
error: Content is protected !!