March 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ 3 ತಿಂಗಳ ಕಾಲ ಕಣಿಯೂರು ವಲಯದ ಪಿಲಿಗೂಡು ಅಭಿನಂದನ್ ಜ್ಞಾನವಿಕಾಸ ಕೇಂದ್ರದಲ್ಲಿ ನಡೆದ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.

ಜನಜಾಗೃತಿ ವಲಯಧ್ಯಕ್ಷ ಪ್ರಫುಲ್ಲಚಂದ್ರ ಅಧ್ಯಾಯಣ್ತಯ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಮಹಿಳೆಯರ ಏಳಿಗಾಗಿ ಜ್ಞಾನವಿಕಾಸ ಕೇಂದ್ರದಡಿಯಲ್ಲಿ ನಡೆದಂತಹ ಹೊಲಿಗೆ ತರಬೇತಿ ಬಹಳಷ್ಟು ಯಶಸ್ವಿಯಾಗಿದೆ ಹಾಗೂ ಕಲಿತ ವಿದ್ಯೆಯನ್ನು ಶ್ರದ್ಧೆಯಿಂದ ಜೀವನದಲ್ಲಿ ಅನುಷ್ಠಾನಿಸಬೇಕೆಂದರು.

ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್‌ರವರು ಮಾತನಾಡಿ ಟೈಲರಿಂಗ್ ತರಬೇತಿ ಪಡೆದ ಸದಸ್ಯರು ತಮ್ಮ ಜೀವನದಲ್ಲಿ ವೃತ್ತಿಯನ್ನು ನಿಷ್ಠೆಯಿಂದ ನಡೆಸುವುದು ಹಾಗೂ ಜ್ಞಾನವಿಕಾಸ ಕಾರ್ಯಕ್ರಮದಿಂದ ಮಹಿಳೆಯರ ಸಬಲೀಕರಣ ಆಗಬೇಕು ಎಂಬುವುದು ಹೇಮಾವತಿ ವೀ. ಹೆಗ್ಗಡೆಯವರ ಆಶಯ ಎಂದು ಜ್ಞಾನ ವಿಕಾಸ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಜಾನಕಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹಲವಾರು ಕಾರ್ಯಕ್ರಮಗಳು ಅನುಷ್ಠಾನವಾಗುತ್ತಿರುವ ಬಗ್ಗೆ ಮಾತನಾಡಿದರು.

ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ವೀಣಾ ಶುಭ ಹಾರೈಸಿದರು, ಟೈಲರಿಂಗ್ ಶಿಕ್ಷಕಿ, ಸೇವಾಪ್ರತಿನಿಧಿ ಹಾಗೂ ತರಬೇತಿ ಪಡೆದಿರುವ 32 ಜನ ಸದಸ್ಯರು ಉಪಸ್ಥಿತರಿದ್ದರು.

ಶ್ರೀಮತಿ ಆರೀಫ, ಸೌಮ್ಯ, ಕವಿತ ತರಬೇತಿಯ ಬಗ್ಗೆ ಅನಿಸಿಕೆಯನ್ನು ವ್ಯಕ್ತಪಡಿಸಿದರು. ತರಬೇತಿ ಪಡೆದ ಸದಸ್ಯರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya
error: Content is protected !!