March 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

ಪಡಂಗಡಿ: ಪಡಂಗಡಿ ಗ್ರಾಮ ಪಂಚಾಯತಿಯ ಮಹಿಳಾ ಗ್ರಾಮಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು.

ಬೆಳ್ತಂಗಡಿ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕಿ ಶ್ರೀಮತಿ ಉಷಾ ಕಾಮತ್ ಇವರು ಮಹಿಳೆಯರ ಕೌಟುಂಬಿಕ ದೌರ್ಜನ್ಯದ ಬಗ್ಗೆ, ಮಹಿಳೆಯರ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣದ ಬಗ್ಗೆ ಸುದೀರ್ಘವಾದ ಮಾಹಿತಿಯನ್ನು ನೀಡಿದರು.

ಮಹಿಳೆಯರ ಅಪೌಷ್ಠಿಕತೆ ಮತ್ತು ರಕ್ತಹೀನತೆ ಮತ್ತು ರಕ್ಷಣೆ ವಿಷಯದ ಬಗ್ಗೆ ಪಡಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಕುಮಾರಿ ಸಂಧ್ಯಾ ಮಾಹಿತಿಯನ್ನು ನೀಡಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ವಸಂತಿ ಹಾಗೂ ಸದಸ್ಯೆ ಶ್ರೀಮತಿ ಮೀನಾಕ್ಷಿ ಇವರು ಮಹಿಳೆಯರು ಸರಕಾರದ ಯೋಜನೆಗಳನ್ನು ಸಮರ್ಥವಾಗಿ ಉಪಯೋಗಿಸಿಕೊಂಡು ಸ್ವಾವಲಂಬಿ ಜೀವನ ನಡೆಸುವಂತೆ ಕರೆ ನೀಡಿದರು.

ಪಡಂಗಡಿ ಗ್ರಾಮ ಪಂಚಾಯತಿಯ ಸಮಗ್ರ ಸ್ವಚ್ಛತೆಗೆ ಅಹಿರ್ನಿಶಿಯಾಗಿ ದುಡಿಯುತ್ತಿರುವ ಮಹಿಳಾ ಸ್ವಚ್ಛಾಗ್ರಹಿಗಳಾದ ಶ್ರೀಮತಿ ಕುಸುಮಾವತಿ ಮತ್ತು ಶ್ರೀಮತಿ ಯಮುನಾ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು ಹಾಗೂ ಇವರಿಗೆ ಸಮವಸ್ತ್ರವನ್ನು ವಿತರಿಸಲಾಯಿತು.

ಸಭೆಯಲ್ಲಿ ಪಾಲ್ಗೊಂಡ ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಸದಸ್ಯರಾದ ಸಂತೋಷ್ ಕುಮಾರ್ ಜೈನ್, ರಿಚರ್ಡ್ ಗೋವಿಯಸ್, ಹಾಮದ್ ಬಾವಾ, ಶಕುಂತಳಾ, ವನಜಾಕ್ಷಿ, ಸುಮತಿ ಪಿ. ಮತ್ತು ಶುಭಾ, ಆಶಾ ಕಾರ್ಯಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಂಥಾಲಯ ಮೇಲ್ವಿಚಾರಕಿ, ಸಿರಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮೀ ಹಾಗೂ ಪದಾಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನಾ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಮಹಿಳೆಯರು ಉತ್ತಮ ಹವ್ಯಾಸಗಳಲ್ಲಿ ತೊಡಗಿಸಿಕೊಂಡು ಸ್ವಸ್ಥ ಸಮಾಜದ ಪರಿವರ್ತನೆಗೆ ತೊಡಗಿಸಿಕೊಳ್ಳುವಂತೆ ಹೇಳಿ ಧನ್ಯವಾದವಿತ್ತರು.

Related posts

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya
error: Content is protected !!