September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

ಪಡಂಗಡಿ: ಪಡಂಗಡಿ ಗ್ರಾಮ ಪಂಚಾಯತಿಯ ಮಹಿಳಾ ಗ್ರಾಮಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು.

ಬೆಳ್ತಂಗಡಿ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕಿ ಶ್ರೀಮತಿ ಉಷಾ ಕಾಮತ್ ಇವರು ಮಹಿಳೆಯರ ಕೌಟುಂಬಿಕ ದೌರ್ಜನ್ಯದ ಬಗ್ಗೆ, ಮಹಿಳೆಯರ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣದ ಬಗ್ಗೆ ಸುದೀರ್ಘವಾದ ಮಾಹಿತಿಯನ್ನು ನೀಡಿದರು.

ಮಹಿಳೆಯರ ಅಪೌಷ್ಠಿಕತೆ ಮತ್ತು ರಕ್ತಹೀನತೆ ಮತ್ತು ರಕ್ಷಣೆ ವಿಷಯದ ಬಗ್ಗೆ ಪಡಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಕುಮಾರಿ ಸಂಧ್ಯಾ ಮಾಹಿತಿಯನ್ನು ನೀಡಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ವಸಂತಿ ಹಾಗೂ ಸದಸ್ಯೆ ಶ್ರೀಮತಿ ಮೀನಾಕ್ಷಿ ಇವರು ಮಹಿಳೆಯರು ಸರಕಾರದ ಯೋಜನೆಗಳನ್ನು ಸಮರ್ಥವಾಗಿ ಉಪಯೋಗಿಸಿಕೊಂಡು ಸ್ವಾವಲಂಬಿ ಜೀವನ ನಡೆಸುವಂತೆ ಕರೆ ನೀಡಿದರು.

ಪಡಂಗಡಿ ಗ್ರಾಮ ಪಂಚಾಯತಿಯ ಸಮಗ್ರ ಸ್ವಚ್ಛತೆಗೆ ಅಹಿರ್ನಿಶಿಯಾಗಿ ದುಡಿಯುತ್ತಿರುವ ಮಹಿಳಾ ಸ್ವಚ್ಛಾಗ್ರಹಿಗಳಾದ ಶ್ರೀಮತಿ ಕುಸುಮಾವತಿ ಮತ್ತು ಶ್ರೀಮತಿ ಯಮುನಾ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು ಹಾಗೂ ಇವರಿಗೆ ಸಮವಸ್ತ್ರವನ್ನು ವಿತರಿಸಲಾಯಿತು.

ಸಭೆಯಲ್ಲಿ ಪಾಲ್ಗೊಂಡ ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಸದಸ್ಯರಾದ ಸಂತೋಷ್ ಕುಮಾರ್ ಜೈನ್, ರಿಚರ್ಡ್ ಗೋವಿಯಸ್, ಹಾಮದ್ ಬಾವಾ, ಶಕುಂತಳಾ, ವನಜಾಕ್ಷಿ, ಸುಮತಿ ಪಿ. ಮತ್ತು ಶುಭಾ, ಆಶಾ ಕಾರ್ಯಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಂಥಾಲಯ ಮೇಲ್ವಿಚಾರಕಿ, ಸಿರಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮೀ ಹಾಗೂ ಪದಾಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನಾ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಮಹಿಳೆಯರು ಉತ್ತಮ ಹವ್ಯಾಸಗಳಲ್ಲಿ ತೊಡಗಿಸಿಕೊಂಡು ಸ್ವಸ್ಥ ಸಮಾಜದ ಪರಿವರ್ತನೆಗೆ ತೊಡಗಿಸಿಕೊಳ್ಳುವಂತೆ ಹೇಳಿ ಧನ್ಯವಾದವಿತ್ತರು.

Related posts

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಪದ್ಮುಂಜ: ಮಾ.1-6 : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya
error: Content is protected !!