ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.14ರಿಂದ ಪ್ರಾರಂಭಗೊಂಡು ಮಾ.19ರವರೆಗೆ ನಡೆಯಲಿದೆ.

ಮಾ.17ರಂದು ವರ್ಷಾವಧಿ ಜಾತ್ರೋತ್ಸವ, ಮಧ್ಯಾಹ್ನ ರಥದಲ್ಲಿ ಮಹಾಪೂಜೆ, ರಥೋತ್ಸವ, ಹೂವಿನ ಪೂಜೆ ನಡೆಯಿತು. ಮಧ್ಯಾಹ್ನ 1.30ರಿಂದ ರಾತ್ರಿ 7.30ರ ತನಕ ಮಹಾ ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಲಿದೆ.

ಈ ಸಂದರ್ಭದಲ್ಲಿ ಅನುವಂಶೀಯ ಆಡಳಿತ ಮೊಕ್ತೇಸರ ಎ. ಜೀವಂಧರ ಕುಮಾರ್ ಜೈನ್, ವಿಕಾಸ್ ಜೈನ್, ವಿಶ್ವಾಸ್ ಜೈನ್ ಹಾಗೂ ಅವರ ಕುಟುಂಬಸ್ಥರು, ಊರ-ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.