22.5 C
ಪುತ್ತೂರು, ಬೆಳ್ತಂಗಡಿ
March 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ : ಎಸ್. ಡಿ. ಎಂ. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಉಜಿರೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಅಮೃತ ಮಹೋತ್ಸವ ಸಮಿತಿ ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮೈರೋಳ್ತಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಪ್ರಗತಿಬಂಧು ಒಕ್ಕೂಟ ಮೈರೋಳ್ತಡ್ಕ ಇವುಗಳ ಸಹಯೋಗದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರವು ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮಾ. 16 ರಂದು ನಡೆಯಿತು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಕೆ. ಶಾಹುಲ್ ಹಮೀದ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.
ಎಸ್.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಡಳಿತ ನಿರ್ದೇಶಕ ಜನಾರ್ದನ್ ಅವರು ಮಾತನಾಡಿ ಆರೋಗ್ಯದ ಮಹತ್ವವನ್ನು ವಿವರಿಸುತ್ತಾ ಲಭ್ಯವಿರುವ ವೈದ್ಯಕೀಯ ಸೇವೆಗಳ ಅವಕಾಶಗಳು ಹಾಗೂ ಬಡ ಕುಟುಂಬಗಳಿಗಾಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಶುಭಹಾರೈಸಿದರು.
ವೇದಿಕೆಯಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ. ದ.ಕ. ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ , ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಕೃಷ್ಣಯ್ಯ ಆಚಾರಿ , ಗ್ರಾ.ಪಂ.ಅಧ್ಯಕ್ಷ ದಿನೇಶ್ ಖಂಡಿಗ, ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಶಾಂತ್ ನಿರುಂಬುಡ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗುರುಪ್ರಸಾದ್ ಎಂ. ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷ ಸುಂದರ ಪೂಜಾರಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಚಂದ್ರಾವತಿ ಪ್ರಾಸ್ತಾವಿಕವಾಗಿ ಮಾತನಾಡಿ ಅಮೃತ ಮಹೋತ್ಸವದ ಹಿನ್ನೋಟ ಮತ್ತು ಮುನ್ನೋಟವನ್ನು ಸಭೆಯ ಮುಂದಿಟ್ಟು ಅಮೃತ ಮಹೋತ್ಸವ ಕಾರ್ಯಕ್ರಮದ ಯಶಸ್ವಿಗಾಗಿ ಪೋಷಕರ , ವಿದ್ಯಾಭಿಮಾನಿ ದಾನಿಗಳ ತನು, ಮನ, ಧನಗಳ ಸಹಕಾರ ಕೋರಿದರು.


ಈ ಸಂದರ್ಭ ಅಮೃತ ಮಹೋತ್ಸವ ಸವಿ ನೆನಪಿಗಾಗಿ ನೂತನ ‘ರಂಗಮಂದಿರ’ ನಿರ್ಮಾಣಕ್ಕಾಗಿ ಸರಕಾರದಿಂದ ಅನುದಾನ ಮಂಜೂರುಗೊಳಿಸುವ ಬೇಡಿಕೆಯ ಮನವಿಯನ್ನು ಅಮೃತ ಮಹೋತ್ಸವ ಸಮಿತಿ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಜಿ.ಪಂ. ಮಾಜಿ ಸದಸ್ಯ ಕೆ.ಕೆ. ಶಾಹುಲ್ ಹಮೀದ್ ಅವರಿಗೆ ನೀಡಲಾಯಿತು.
ಶಿಬಿರದಲ್ಲಿ ಮೂಳೆ ಶಸ್ತ್ರಚಿಕಿತ್ಸಾ ತಜ್ಞರು, ನೇತ್ರ ತಜ್ಞರು, ಚರ್ಮರೋಗ ತಜ್ಞರು, ಸ್ತ್ರೀರೋಗ ತಜ್ಞರು, ಕಿವಿ -ಮೂಗು -ಗಂಟಲು ತಜ್ಞರು, ಮಕ್ಕಳ ರೋಗ ತಜ್ಞರು, ಮೆಡಿಸಿನ್ ವಿಭಾಗ ತಜ್ಞರು ಸೇರಿದಂತೆ 30ಕ್ಕೂ ಅಧಿಕ ತಜ್ಞ ವೈದ್ಯರು, ವೈದ್ಯರು ಹಾಗೂ ಸಿಬ್ಬಂದಿಗಳು ಭಾಗವಹಿಸಿ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ, ವೈದ್ಯಕೀಯ ಸಲಹೆ ನೀಡಿದರು.
ಶಿಕ್ಷಕ ಶ್ರೀಧರ್ ಕಾರ್ಯಕ್ರಮ ನಿರೂಪಿಸಿ ಶಿಕ್ಷಕಿ ರಾಜಶ್ರೀ ಪಿ.ವಿ. ಸ್ವಾಗತಿಸಿದರು. ಅಮೃತ ಮಹೋತ್ಸವ ಸಮಿತಿ‌ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಸದಸ್ಯರು ಪೋಷಕರು, ವಿದ್ಯಾಭಿಮಾನಿಗಳು ಪಾಲ್ಗೊಂಡರು.

Related posts

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

Suddi Udaya

ಬೆಳ್ತಂಗಡಿ ಪೋಲಿಸ್ ಠಾಣಾ ನಿರೀಕ್ಷಕರಾಗಿ ಬಸವಲಿಂಗಯ್ಯ ಸುಬ್ಬಾಪುರಮಠ ಅಧಿಕಾರ ಸ್ವೀಕಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya
error: Content is protected !!