25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.27 ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.

ಬೆಳ್ತಂಗಡಿಯ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ ಅವರು ಸ್ವಯಂ ಆಸಕ್ತಿಯಿಂದ ದೆಹಲಿಗೆ ತೆರಳಿ, ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಇಲಾಖೆಗಳಿಗೆ ಹೋಗಿ ಶೀಘ್ರ ಅನುಮತಿ ದೊರಕಿಸಲು ಶ್ರಮಿಸಿದ್ದಾರೆ.

ಸರ್ಕಾರದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಂಘಟಿತ ಪ್ರಯತ್ನದ ಫಲವಾಗಿ ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಪಂಜಾಲ, ಮಾಳಿಗೆ ಬೈಲಿನ 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಇಂದು ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಅನುಮೋದನೆ ಲಭಿಸುವ ನಿರೀಕ್ಷೆ ಇದೆ ಎಂದರು.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಫೆ.21: ಸಹೋದರಿಯರಾದ ಧರಿತ್ರಿ ಭಿಡೆ ಹಾಗೂ ಹಂಸಿನಿ ಭಿಡೆ ಯವರ ಭರತನಾಟ್ಯ ರಂಗಪ್ರವೇಶ

Suddi Udaya
error: Content is protected !!