ಬೆಳ್ತಂಗಡಿ : ಕುವೆಟ್ಟು ಗ್ರಾಮದ ಮದ್ದಡ್ಕ 5 ಸೆನ್ಸ್ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ರಫೀಕ್ ಎಂಬಾತನನ್ನು
ದಸ್ತಗೀರ್ ಮಾಡಿ 90 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ಮಾ.17 ರಂದು ನಡೆದಿದೆ.

ಮಂಗಳೂರು ವಿಭಾಗ ಅಬಕಾರಿ ಜಂಟಿ ಆಯುಕ್ತರು, ದ.ಕ.ಜಿಲ್ಲಾ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ಬಂಟ್ವಾಳ ಉಪ ವಿಭಾಗ ಅಬಕಾರಿ ಉಪ ಅಧಿಕ್ಷಕರು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಬೆಳ್ತಂಗಡಿ ವಲಯ ಅಬಕಾರಿ ಉಪ ನಿರೀಕ್ಷಕರು ಎನ್ ಡಿ ಪಿ ಎಸ್ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.