March 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿ.ಎಡ್. ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಫೆಬ್ರವರಿ 2025 ರಲ್ಲಿ ನಡೆಸಿದ ದ್ವಿತೀಯ ಹಾಗೂ ಚತುರ್ಥ ಸೆಮಿಸ್ಟರ್ ಬಿ.ಎಡ್. ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಫಲಿತಾಂಶ ಬಂದಿರುತ್ತದೆ.

ದ್ವಿತೀಯ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ ಒಟ್ಟು49 ವಿದ್ಯಾರ್ಥಿಗಳಲ್ಲಿ 47 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 02 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರುತ್ತಾರೆ. ಅಖಿಲಾ ಎಂ ಪಿ 574 (95..67%) ಪಡೆದು ಪ್ರಥಮ ಸ್ಥಾನವನ್ನು, ವಿಸ್ಮಿತಾ 555 (92.50%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಹಾಗೂ ದಿವ್ಯಾ ಕೆ ಎಸ್ 548 (91.33%) ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.


ಹಾಗೆಯೇ ಚತುರ್ಥ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ ಒಟ್ಟು50 ವಿದ್ಯಾರ್ಥಿಗಳಲ್ಲಿ ಎಲ್ಲಾ 50 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. ವಿನಿತ್ ಲ್ಯಾನ್ಸನ್ ಸಿಕ್ವೇರಾ 581 (96.83%) ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು, ರಶ್ಮಿ ಕೆ 578 (96.33%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು, ಭಾರ್ಗವಿ ಹಾಗೂ ವಿಜಯಲಕ್ಷ್ಮಿ ನಾಯಕ್ 575 (92.83%) ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.


ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿ ಅವರಿಗೆ ಶುಭವನ್ನು ಹಾರೈಸಿರುತ್ತಾರೆ.

Related posts

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya
error: Content is protected !!