ಬೆಳ್ತಂಗಡಿ: ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳಿಂದ ಬೆಂಕಿ ಹತ್ತಿಕೊಂಡ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಸಮೀಪ ಮಾ.18 ರಂದು ನಡೆದಿದೆ. ಸ್ಥಳೀಯರು ತಕ್ಷಣ ಕಾರ್ಯ ಪ್ರವೃತ್ತರಾಗಿ ಬೆಂಕಿಯನ್ನು ಹತೋಟಿಗೆ ತಂದ ಕಾರಣ ಹೆಚ್ಚಿನ ಹಾನಿ ಸಂಭವಿಸಿಲ್ಲ.

ಹತ್ತಿರದಲ್ಲೇ ರಬ್ಬರ್ ತೋಟವಿದ್ದು ಇಲ್ಲಿಗೆ ಬೆಂಕಿ ಪಸರಿಸುತಿದ್ದರೆ ಹೆಚ್ಚಿನ ಅಪಾಯ ಉಂಟಾಗುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.