May 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.27 ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.

ಬೆಳ್ತಂಗಡಿಯ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ ಅವರು ಸ್ವಯಂ ಆಸಕ್ತಿಯಿಂದ ದೆಹಲಿಗೆ ತೆರಳಿ, ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಇಲಾಖೆಗಳಿಗೆ ಹೋಗಿ ಶೀಘ್ರ ಅನುಮತಿ ದೊರಕಿಸಲು ಶ್ರಮಿಸಿದ್ದಾರೆ.

ಸರ್ಕಾರದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಂಘಟಿತ ಪ್ರಯತ್ನದ ಫಲವಾಗಿ ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಪಂಜಾಲ, ಮಾಳಿಗೆ ಬೈಲಿನ 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಇಂದು ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಅನುಮೋದನೆ ಲಭಿಸುವ ನಿರೀಕ್ಷೆ ಇದೆ ಎಂದರು.

Related posts

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya
error: Content is protected !!