27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

ಬೆಳ್ತಂಗಡಿ ತಾಲೂಕಿನ ಅತ್ಯಂತ ಗ್ರಾಮೀಣ ಪ್ರದೇಶವಾದ ನೇಲ್ಯಡ್ಕದಲ್ಲಿರುವ ಸರಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನವರು ಎರಡು ವಾಲಿಬಾಲ್ ಹಾಗೂ 2 ತ್ರೋಬಾಲ್ ಪೋಲ್ ಗಳನ್ನು ಕೊಡುಗೆಯಾಗಿ ನೀಡಿದರು.

ಬ್ಯಾಂಕಿನ ಬೆಳ್ತಂಗಡಿ ಶಾಖೆಯ ಮ್ಯಾನೇಜರ್ ಶರುಣ್ ಪಿಂಟೋ ಹಾಗೂ ಸಿಬ್ಬಂದಿ ರಾಜೇಶ್ ಇವರು ನೇಲ್ಯಡ್ಕಕ್ಕೆ ಆಗಮಿಸಿ ಈ ಕೊಡುಗೆಯನ್ನು ಸಂಸ್ಥೆಗೆ ಹಸ್ತಾಂತರಿಸಿದರು. ಗ್ರಾಮೀಣ ಪ್ರದೇಶದಲ್ಲಿರುವ ಕನ್ನಡ ಮಾಧ್ಯಮ ಸರಕಾರಿ ಪ್ರೌಢಶಾಲೆಗೆ ಶಾಶ್ವತ ಕೊಡುಗೆಯನ್ನು ನೀಡಿದ ಎಂಸಿಸಿ ಬ್ಯಾಂಕ್ ಅಧ್ಯಕ್ಷರಿಗೆ ಹಾಗೂ ಆಡಳಿತ ಮಂಡಳಿಯ ಎಲ್ಲಾ ಸದಸ್ಯರಿಗೆ ಮುಖ್ಯೋಪಾಧ್ಯಾಯ ರಾಜೇಂದ್ರ ಕೃಷ್ಣ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.


ಎಸ್ ಡಿ ಎಂ ಸಿ ಯ ಯಶವಂತ ಗೌಡ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ವಿಜಯಕುಮಾರ್ ನಿರೂಪಿಸಿ, ಅರವಿಂದ ಗೋಖಲೆ ಸ್ವಾಗತಿಸಿ ಉದಯಕುಮಾರ್ ವಂದಿಸಿದರು.

ಈ ಸಮಾರಂಭದಲ್ಲಿ ಸಂಸ್ಥೆಯ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!