September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು.

ಈ ಶಿಬಿರವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಜೋನ್ ಬ್ಯಾಪಿಸ್ಟ್ ರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು ಹಾಗೂ ಈ ಶಿಬಿರವನ್ನು ಇನ್ನಷ್ಟು ಅರ್ಥಪೂರ್ಣವಾಗಿ ನಡೆಸಿಕೊಳ್ಳಲು ತಾಲೂಕಿನ ನಗರ ಪುನರ್ವಸತಿ ಕಾರ್ಯಕರ್ತರು, ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಲಾಯಿತು.

ಅದರಲ್ಲಿಯೂ ಮುಖ್ಯವಾಗಿ ಜಿಲ್ಲಾ ಆಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ವೈದ್ಯರ ಮೂಲಕ ಹಾಗೂ ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ತಾಲೂಕಿನ ಅನೇಕ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಅವರಿಗೆ ಸಿಗಬೇಕಾದ ಸರ್ಕಾರ ಸೌಲಭ್ಯ ಯೋಜನೆಗಳನ್ನು ಪಡೆದುಕೊಳ್ಳಲು ಸಹಕಾರ ಆಗಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಮಾಡಿ ನೀಡಲಾಯಿತು.

Related posts

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!