ಜಾರಿಗೆಬೈಲು: ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗೇರುಕಟ್ಟೆ ಸಮೀಪದ ಜಾರಿಗೆಬೈಲು ಎಂಬಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮರ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಮಾ.20ರಂದು ರಾತ್ರಿ ನಡೆದಿದೆ.

ಬೆಳಾಲು ಪೆರಿಯಡ್ಕ ನಿವಾಸಿ ಸಂಜೀವ ಎಂಬುವರ ಪುತ್ರ ಪ್ರವೀಣ ಎಸ್. ಎಲ್. (25.ವ) ಮೃತಪಟ್ಟಿದ್ದು ಬ್ಯಾಂಕ್ ಉದ್ಯೋಗಿ ಎಂದು ತಿಳಿದು ಬಂದಿದೆ. ತಕ್ಷಣ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಕೊನೆ ಉಸಿರು ಎಳೆದರು.

ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.