ಬೆಳ್ತಂಗಡಿ: ಕರಾವಳಿ ಭಾಗದಲ್ಲಿ ಕೃಷಿಕರಿಗೆ ಅತಿ ಹೆಚ್ಚು ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ರೈತರ ಹಿತಾಸಕ್ತಿಯ ದೃಷ್ಟಿಯಿಂದ ನಿಯಂತ್ರಿಸಬೇಕಾಗಿ ಶಾಸಕ ಹರೀಶ್ ಪೂಂಜರಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ರಿಗೆ ಮನವಿ ಮಾಡಲಾಯಿತು.
ಈ ಬಗ್ಗೆ ಮನವಿಗೆ ಸ್ಪಂದಿಸಿದ ಸಚಿವರು ಮುಂದಿನ ಎರಡು ದಿನಗಳ ಒಳಗಾಗಿ ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳುವ ಬಗ್ಗೆ ಭರವಸೆಯನ್ನು ನೀಡಿದ್ದಾರೆ.