ಬೆಳ್ತಂಗಡಿ ತಾಲೂಕಿನ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಲು ತಾಲೂಕಿನ ವಿವಿಧ ಭಾಗಗಳಾದ ಕುತ್ಲೂರು, ಸೋಮಂತಡ್ಕ, ಉಜಿರೆ ಹಾಗೂ ಅರಸಿನಮಕ್ಕಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿದ್ಯುತ್ ಸಬ್ ಸ್ಟೇಷನ್ ಗಳಿಗೆ ಅಗತ್ಯವಿರುವ ಜಾಗಗಳನ್ನು ಇಂಧನ ಇಲಾಖೆಗೆ ಹಸ್ತಾಂತರಿಸಿದ್ದು ಸರ್ಕಾರ ಈ ಕೂಡಲೇ ಸಬ್ ಸ್ಟೇಷನ್ಗಳನ್ನು ನಿರ್ಮಿಸಲು ಟೆಂಡರ್ ಪ್ರಕ್ರಿಯೆ ನಡೆಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ ಮಾಡಲಾಯಿತು.
