25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಮಂಗಳೂರು ಇದರ ಸಹಯೋಗದೊಂದಿಗೆ ‘ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ನೋಂದಣಿ ಕಾರ್ಯಕ್ರಮ ಇಂದು (ಮಾ.21) ನಡೆಯಿತು.

ಸಂಪನ್ಮೂಲ ವ್ಯಕ್ತಿ, ದಕ್ಷಿಣ ಕನ್ನಡ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಆಪ್ತ ಸಮಾಲೋಚಕಿ ಮತ್ತು ತರಬೇತುದಾರೆ ಮಂಜೂಷಾ ಪಿ. ಅವರು, ಕಾರ್ಯಕ್ರಮದ ಉದ್ದೇಶ, ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗ ನೋಂದಣಿ ಕ್ರಮ ಮತ್ತು ಅದರ ಪ್ರಯೋಜನದ ಬಗ್ಗೆ ತಿಳಿಸಿದರು.

ಉದ್ಯೋಗ ಮೇಳಗಳಲ್ಲಿ ಪ್ರಶ್ನೆಗೆ ಉತ್ತರಿಸಬೇಕಾದ ರೀತಿ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಬಗ್ಗೆ ಮುಂತಾದ ವಿಷಯಗಳ ಕುರಿತು ವಿಚಾರ ಹಂಚಿಕೊಂಡರು.

ನೋಂದಣಿ ಮಾಡಿಕೊಂಡ ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಪೂರ್ಣಗೊಂಡ ಕೂಡಲೇ ಅಥವಾ ಪ್ರತೀ 3 ವರ್ಷಗಳಿಗೊಮ್ಮೆ ನೋಂದಣಿ ನವೀಕರಿಸಿಕೊಳ್ಳುವಂತೆ ಸೂಚಿಸಿದರು.

ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಅಫೀಜಾ ಕಾರ್ಯಕ್ರಮ ನಿರ್ವಹಿಸಿದರು. 40 ವಿದ್ಯಾರ್ಥಿನಿಯರು ಹೆಸರು ನೋಂದಾಯಿಸಿಕೊಂಡರು.

Related posts

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

Suddi Udaya

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya
error: Content is protected !!