March 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಕುಕ್ಕೇಡಿ: ಇಲ್ಲಿಯ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಅನಿತಾ ರವರ ಅಧ್ಯಕ್ಷತೆಯಲ್ಲಿ ಮಾ.21 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಧನಂಜಯ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಉಪಾಧ್ಯಕ್ಷೆ ಶ್ರೀಮತಿ ಕುಸುಮ, ಸದಸ್ಯರಾದ ಶ್ರೀಮತಿ ಗುಣವತಿ, ಜನಾರ್ದನ ಪೂಜಾರಿ, ಶ್ರೀಮತಿ ತೇಜಸ್ವಿನಿ, ಶ್ರೀಮತಿ ಗೀತಾ, ಗೋಪಾಲ ಶೆಟ್ಟಿ, ಧನಂಜಯ, ಶ್ರೀಮತಿ ರಜನಿ, ದಿನೇಶ ಮೂಲ್ಯ, ಶ್ರೀಮತಿ ಪ್ರವೀತ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಪಾಲನ ವರದಿ ವಾಚಿಸಿದರು. ಬಿಲ್ ಕಲೆಕ್ಟರ್ ಆನಂದ ಸ್ವಾಗತಿಸಿದರು.

Related posts

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ತಣ್ಣೀರುಪಂಥ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣೆ ಕಾರ್ಯಕ್ರಮ : ಗ್ರಾಮಾಭಿವೃದ್ಧಿ ಯೋಜನೆ ಪರಿಕಲ್ಪನೆ ಇಂದು ಜಗತ್ತಿಗೆ ಮಾದರಿಯಾಗಿದೆ: ಶಾಸಕ ಹರೀಶ್ ಪೂಂಜ

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

Suddi Udaya
error: Content is protected !!