ಪದ್ಮುಂಜ : ಮಾ 22 ನಾಳೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಂಜೆ 6.30 ಕ್ಕೆ ಗಂಟೆಗೆ ಸರಿಯಾಗಿ ಸಂಘದ ಪದ್ಮುಂಜ ಸಿ ಎ ಬ್ಯಾಂಕ್ ರೈತ ಸಭಾಭವನದಲ್ಲಿ ಜರುಗಲಿದೆ,
ಈ ಸಮಾರಂಭಕ್ಕೆ ಲೋಕಸಭಾ ಸದಸ್ಯರಾದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಕಿಶೋರ್ ಕುಮಾರ್ ಬೋಟ್ಯಾಡಿ ಪುತ್ತೂರು,ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ, ಬಿಜೆಪಿ ಬೆಳ್ತಂಗಡಿ ಮಂಡಲಾಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ಗಳಾದ ಜಯಾನಂದ ಗೌಡ ಪ್ರಜ್ವಲ್, ಪ್ರಶಾಂತ್ ಪಾರೆಂಕಿ, ಚುನಾವಣಾ ಉಸ್ತುವಾರಿಗಳಾದ ಬಾಲಕೃಷ್ಣ ಗೌಡ ಬಿರ್ಮೊಟ್ಟು, ಸಹ ಉಸ್ತುವಾರಿ ಜಯಪ್ರಸಾದ್ ಕಡಮ್ಮಾಜೆ ಹಾಗೂ ಇನ್ನುಳಿದ ಅನೇಕ ಗಣ್ಯರು, ಪಕ್ಷದ ಪ್ರಮುಖರು, ಮತದಾರರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.