28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

ಬೆಳಾಲು: ಇಲ್ಲಿಯ ಕೊಡೋಳುಕೆರೆ ಎಂಬಲ್ಲಿ ನಾಲ್ಕು ತಿಂಗಳ ಹೆಣ್ಣುಮಗುವನ್ನು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಇಂದು(ಮಾ.22) ಬೆಳಗ್ಗೆ ನಡೆದಿದೆ.

ಬೆಳಾಲು ಗ್ರಾ.ಪಂ ವ್ಯಾಪ್ತಿಯ ಮುಂಡ್ರೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ಧ ದಾರಿಹೋಕ ಮಹಿಳೆಗೆ ಕೇಳಿದ್ದು ತಕ್ಷಣ ಅವರು ಮಗುವನ್ನು ಕಂಡು ಸಂಬಂಧ ಪಟ್ಟವರಿಗೆ ತಿಳಿಸಿದ್ದಾರೆ. ಹಸುಕೂಸು ಆರೋಗ್ಯ ಕರವಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ಪೊಲೀಸ್ ಮತ್ತು ಆರೋಗ್ಯ ಇಲಾಖೆ ದೌಡಾಯಿಸಿದ್ದು ಮಹಿಳಾ ಮತ್ತು ಮಕ್ಕಳ ಇಲಾಖಾ ಬರುವಿಕೆಗಾಗಿ ಕಾಯುತ್ತಿದ್ದಾರೆ. ಸುದ್ದಿ ಉದಯ ಪತ್ರಿಕೆಗೆ ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

Related posts

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಅವರಿಂದ ಮತದಾನ

Suddi Udaya

ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ನಿಂದ ಖಂಡನೆ

Suddi Udaya

ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ: ಶಾಸಕ ಹರೀಶ್ ಪೂಂಜ ಸಂತಸ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಚಿನ್ನದ ಕರಿಮಣಿ ಸರ ಕಳ್ಳತನ ಪ್ರಕರಣ ಆರೋಪಿ ಉಮೇಶ್ ಗೌಡ ಅಪರಾಧಿಯೆಂದು ತೀರ್ಪು ನೀಡಿದ ನ್ಯಾಯಾಲಯ

Suddi Udaya

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!