38.6 C
ಪುತ್ತೂರು, ಬೆಳ್ತಂಗಡಿ
March 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು ಇಲ್ಲಿ 26ನೇ ವಾರ್ಷಿಕೋತ್ಸವವನ್ನು ಮಾ.22 ರಂದು ಸರಳವಾಗಿ ಆಚರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ನೆರವೇರಿಸಿದರು.


ಸಿಯೋನ್ ಪ್ರಾರ್ಥನಾಲಯದಲ್ಲಿ ದಿವ್ಯಬಲಿ ಪೂಜೆಯನ್ನು ತೋಟತ್ತಾಡಿ ಸೈಂಟ್ ಅಂತೋನಿಯವರ ದೇವಾಲಯದ ಧರ್ಮಗುರುಗಳಾದ ರೆ.ಫಾ.ಜೋಸ್ ಪೂವತ್ತಿಂಗಲ್ ರವರು ನೆರವೇರಿಸಿದರು.
ನಂತರ ಹಮ್ಮಿಕೊಂಡಿದ್ದ ಸಭಾಕಾರ್ಯಕ್ರಮದ ಅಧ್ಯಕ್ಷಸ್ಥಾನವನ್ನು ಅಲಂಕರಿಸಿದ್ದ ತೋಟತ್ತಾಡಿ ಸೈಂಟ್ ಅಂತೋನಿಯವರ ದೇವಾಲಯದ ಧರ್ಮಗುರುಗಳಾದ ರೆ.ಫಾ.ಜೋಸ್ ಪೂವತ್ತಿಂಗಲ್ ರವರು ವಾರ್ಷಿಕೋತ್ಸವಕ್ಕೆ ಶುಭಾಶೀರ್ವದಿಸಿ, ಮನುಷ್ಯನ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಹೇಗೆ ಆಧ್ಯಾತ್ಮಿಕ, ದೈಹಿಕ ಮತ್ತು ಮಾನಸಿಕ ಚಿಕಿತ್ಸೆ ನೀಡಬಹುದು ಎಂಬುದರ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸುತ್ತಾ, ಸಿಯೋನ್ ಆಶ್ರಮದ ಈ ಸೇವೆ ಶ್ಲಾಘನೀಯ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ.ಯವರು, ಸಿಯೋನ್ ಅಶ್ರಮ ಬೆಳೆದು ಬಂದ ಹಾದಿಯನ್ನು, ನಿವಾಸಿಗಳ ಕಾರ್ಯಚಟುವಟಿಕೆಗಳನ್ನು ಮತ್ತು ಪ್ರಸ್ತುತ ಕಾರ್ಯವೈಖರಿಗಳ ಬಗ್ಗೆ ತಿಳಿಸಿದರು. ಸಂಸ್ಥೆಯ ಲೆಕ್ಕಾಧಿಕಾರಿ ಶ್ರೀಮತಿ ಸೌಮ್ಯ ಯು.ಪಿ.ಯವರು ಸಂಸ್ಥೆಯ ವಾರ್ಷಿಕ ವರದಿ ವಾಚಿಸಿದರು. ಸಂಸ್ಥೆಯ ವೈದ್ಯಾಧಿಕಾರಿ ಡಾ.ಶಿವಾನಂದ ಸ್ವಾಮಿಯವರು ಸಂಸ್ಥೆಯ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿ. ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕರಾದ ಡಾ.ಯು.ಸಿ.ಪೌಲೋಸ್‌ರವರು, ಹಿತೈಷಿಗಳಾದ ಜೋಸೆಫ್ ಪಿ.ಪಿ., ಟ್ರಸ್ಟೀ ಸದಸ್ಯರುಗಳಾದ ಶ್ರೀಮತಿ ಮೇರಿ ಯು.ಪಿ., ಆಶ್ರಮದ ಫಲಾನುಭವಿಗಳಾದ ರಾಜ ಮತ್ತು ರಜನಿದೇವಿ ಶೆಟ್ಟಿಯವರು ವೇದಿಕೆಯನ್ನಲಂಕರಿಸಿದ್ದರು.

ವಾರ್ಷಿಕೋತ್ಸವದ ಅಂಗವಾಗಿ ಆಶ್ರಮ ನಿವಾಸಿಗಳಿಗೆ ಮತ್ತು ಸಿಬ್ಬಂದಿವರ್ಗದವರಿಗೆ ಏರ್ಪಡಿಸಲಾಗಿದ್ದ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಮತ್ತು ಅಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.
ಸಂಸ್ಥೆಯ ಸಿಬ್ಬಂದಿ ಶ್ರೀಮತಿ ದಿನಾವತಿಯವರು ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಮಿಷಾ ಕುರಿಯನ್ ರವರು ಸ್ವಾಗತಿಸಿ, ಸಿಬ್ಬಂದಿ ಸಿಂಧು ವಿ.ಎಂ.ರವರು ವಂದಿಸಿದರು.

Related posts

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya

ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ

Suddi Udaya
error: Content is protected !!