37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

ಬೆಳ್ತಂಗಡಿ : ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 27ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.

ಈ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ರವರು ಅನುಮತಿಗಾಗಿ ಹೆಚ್ಚಿನ ಮುತುವರ್ಜಿ ಸಹಕರಿಸಿದಕ್ಕಾಗಿ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ ನಿವಾಸಿಗಳು ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ನಗರ ಸಮಿತಿ ಅಧ್ಯಕ್ಷರಾದ ಸತೀಶ್ ಕೆ. ಕಾಶಿಪಟ್ಣ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ಮಿತ್ತಮಾರ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ಎಮ್, ಪ್ರಸಾದ್ ಪಿಂಟೋ, ಕೆಡಿಪಿ ಸದಸ್ಯರಾದ ಸುನಿಲ್ ಜೈನ್, ಹಾಗೂ ಪ್ರಮುಖರು ಉಪಸ್ಥಿರಿದ್ದರು.

Related posts

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ

Suddi Udaya

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya
error: Content is protected !!