ಪದ್ಮುಂಜ : ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಮಾ. 22 ರಂದು ಪದ್ಮುಂಜ ಸಹಕಾರಿ ಸಂಘದ ರೈತ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ಮಹಾ ಶಕ್ತಿಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ ವಹಿಸಿದರು .
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ, , ಬೆಳ್ತಂಗಡಿ ಬಿಜೆಪಿಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, , ಕಣಿಯೂರು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೆಂಕ್ಯಾರ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮಂಜ ಸಹಕಾರಿ ಸಂಘದ ಉಪಾಧ್ಯಕ್ಷ ಅಶೋಕ್ ಪಿ.ಪಾಂಜಾಳ, ನಿರ್ದೇಶಕರಾದ ನಾರಾಯಣ ಗೌಡ, ಉದಯ ಭಟ್ ಕೆ., ಡೀಕಯ್ಯ ಗೌಡ, ಶೀಲಾವತಿ, ಉದಯ ಬಿ.ಕೆ, ದಿನೇಶ್ ನಾಯ್ಕ, ಶಾರಾದ ಆರ್ ರೈ., ಪ್ರಭಾಕರ ಗೌಡ, ಪ್ರಸಾದ್ ಎ. ಹಾಗೂ ಚಂದನ್ ಕುಮಾರ್ , ಪಕ್ಷದ ಪ್ರಮುಖರು, ಮತದಾರರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತರಾಮ ಮಡಿವಾಳ, ಪಿಲಿಗೂಡು ಹಾಗೂ ಬುಳೇರಿ ಮುರ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಅಭಿನಂದನೆ ಸಲ್ಲಿಸಲಾಯಿತು.
ಪೂರ್ವಿ ವಂದೆ ಮಾತರಂ ಗೀತೆ ಹಾಡಿದರು. ಅಧ್ಯಕ್ಷ ರಕ್ಷಿತ್ ಪಣೆಕ್ಕರ ಸ್ವಾಗತಿಸಿ, ಯತೀಶ್ ಶೆಟ್ಟಿ ಪಣೆಕ್ಕರ ನಿರೂಪಿಸಿದರು.