25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆ

ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನಾ ಕಾರ್ಯಕ್ರಮ

ಪದ್ಮುಂಜ : ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಮಾ. 22 ರಂದು ಪದ್ಮುಂಜ ಸಹಕಾರಿ ಸಂಘದ ರೈತ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ಮಹಾ ಶಕ್ತಿಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ ವಹಿಸಿದರು .

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ, , ಬೆಳ್ತಂಗಡಿ ಬಿಜೆಪಿಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, , ಕಣಿಯೂರು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೆಂಕ್ಯಾರ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮಂಜ ಸಹಕಾರಿ ಸಂಘದ ಉಪಾಧ್ಯಕ್ಷ ಅಶೋಕ್ ಪಿ.ಪಾಂಜಾಳ, ನಿರ್ದೇಶಕರಾದ ನಾರಾಯಣ ಗೌಡ, ಉದಯ ಭಟ್ ಕೆ., ಡೀಕಯ್ಯ ಗೌಡ, ಶೀಲಾವತಿ, ಉದಯ ಬಿ.ಕೆ, ದಿನೇಶ್ ನಾಯ್ಕ, ಶಾರಾದ ಆರ್ ರೈ., ಪ್ರಭಾಕರ ಗೌಡ, ಪ್ರಸಾದ್ ಎ‌. ಹಾಗೂ ಚಂದನ್ ಕುಮಾರ್ , ಪಕ್ಷದ ಪ್ರಮುಖರು, ಮತದಾರರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತರಾಮ ಮಡಿವಾಳ, ಪಿಲಿಗೂಡು ಹಾಗೂ ಬುಳೇರಿ ಮುರ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಅಭಿನಂದನೆ ಸಲ್ಲಿಸಲಾಯಿತು.

ಪೂರ್ವಿ ವಂದೆ ಮಾತರಂ ಗೀತೆ ಹಾಡಿದರು. ಅಧ್ಯಕ್ಷ ರಕ್ಷಿತ್ ಪಣೆಕ್ಕರ ಸ್ವಾಗತಿಸಿ, ಯತೀಶ್ ಶೆಟ್ಟಿ ಪಣೆಕ್ಕರ ನಿರೂಪಿಸಿದರು.

Related posts

ಹೈಕೋರ್ಟ್ ಇ.ಡಿ ಪರ ವಕೀಲರಾಗಿ ಕರುಣಾಕರ ಗೌಡ ಪಿ. ಕೊಯ್ಯೂರು ಆಯ್ಕೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya

ಪಾಲೇದು: ಕೊಲ್ಯೆತ್ತಾರ್ ಕೇಶವ ಪೂಜಾರಿ – ಮಾಲತಿಹಾಗೂ ಮಾಧವ- ವಾರಿಜಾ ದಂಪತಿಗಳ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿಹಬ್ಬದ ಸಂಭ್ರಮ

Suddi Udaya
error: Content is protected !!