September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಮಲೆಕುಡಿಯ ಸಮುದಾಯಕ್ಕೆ ಅವಿನಾಭಾವ ಸಂಬಂಧ ಇದೆ. ಕುಕ್ಕೆ ಶ್ರೀ ಕ್ಷೇತ್ರದ ಸ್ಥಾಪನೆಗೆ ಮೂಲ ಕಾರಣೀಭೂತರಾದ ಕುಕ್ಕೆ ಲಿಂಗ ದೈವಿಕ ಪುರುಷರು ಮಲೆಕುಡಿಯ ಜನಾಂಗಕ್ಕೆ ಸೇರಿದವರು. ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯ ಸಮುದಾಯಕ್ಕೆ ಸ್ಥಾನ ಒದಗಿಸುವ ಪರಂಪರೆ ಇದೆ. ಆದರೆ ಹೊಸ ವ್ಯವಸ್ಥಾಪನಾ ಸಮಿತಿಯಲ್ಲಿ ಸಮುದಾಯದ ಪ್ರತಿನಿಧಿಯವರಿಗೆ ಸ್ಥಾನ ಕಲ್ಪಿಸಲಾಗಿಲ್ಲ ಎಂದು ಮಾಹಿತಿ ಇದೆ.

ಸರ್ಕಾರ ಕೂಡಲೇ ಮರುಪರಿಶೀಲನೆ ಮಾಡಿ ಕ್ಷೇತ್ರದಲ್ಲಿ ಪಾರಂಪರಿಕ ಹಿನ್ನೆಲೆಯಿರುವ ಮೂಲನಿವಾಸಿ ಸಮುದಾಯಕ್ಕೆ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಪ್ರಾತಿನಿಧ್ಯ ನೀಡುವಂತೆ ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ ಇವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

Related posts

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ 36 ವಿದ್ಯಾರ್ಥಿಗಳಿಗೆ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya
error: Content is protected !!