March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

ರೆಖ್ಯ: ಇಲ್ಲಿಯ ಗ್ರಾಮೀಣ ಪ್ರದೇಶವಾದ ನೇಲ್ಯಡ್ಕದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಶಾಲಾ ಕಚೇರಿಯ ಬಳಕೆಗೆ ಒಂದು ಕಪಾಟನ್ನು ಕೊಡುಗೆಯಾಗಿ ನೀಡಲಾಯಿತು.

ಬ್ಯಾಂಕ್ ಆಫ್ ಬರೋಡಾದ ಉದನೆ ಶಾಖೆಯ ಮ್ಯಾನೇಜರ್ ನಿತಿನ್ ಕೃಷ್ಣ ಅವರು ಕಪಾಟನ್ನು ಹಾಗೂ ನೇರಳೆ ಹಣ್ಣಿನ ಗಿಡವನ್ನು ಪ್ರೌಢಶಾಲೆಗೆ ಹಸ್ತಾಂತರಿಸಿ ಶುಭ ಹಾರೈಸಿದರು. ಸಂಸ್ಥೆಯ ಕೋರಿಕೆಯನ್ನು ಪರಿಗಣಿಸಿ ಪ್ರೌಢ ಶಾಲೆಗೆ ಕೊಡುಗೆಯನ್ನು ನೀಡಿದ ಬ್ಯಾಂಕಿಗೆ ಶಾಲಾ ಮುಖ್ಯೋಪಾಧ್ಯಾಯ ರಾಜೇಂದ್ರ ಕೃಷ್ಣ ಧನ್ಯವಾದಗಳನ್ನು ಸಲ್ಲಿಸಿದರು.

ಬ್ಯಾಂಕಿನ ಹಿರಿಯ ಅಧಿಕಾರಿ ಪೌಲೌಸ್ ಪಿ.ಸಿ. , ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉದಯಕುಮಾರ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಅರವಿಂದ ಗೋಖಲೆ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ವಿಜಯಕುಮಾರ್ ವಂದಿಸಿದರು.

Related posts

ಉಡುಪಿ ಹಾಗೂ ದ.ಕ. ಜಿಲ್ಲಾ ಭಾರತೀಯ ಅರಸೇನಾಪಡೆಗಳ ಮಾಜಿ ಯೋಧರ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಮಾಜಿ ಯೋಧರ ಕುಟುಂಬ ಸಮ್ಮಿಲನ ಹಾಗೂ ಮನೋರಂಜನಾ ಕಾರ್ಯಕ್ರಮ

Suddi Udaya

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

Suddi Udaya

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!