ಬೆಳ್ತಂಗಡಿ: ಮಂಗಳೂರಿನ ಮಂಗಳ ಸ್ಟೇಡಿಯಮ್ ನಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂಡಬಿದಿರೆ ದಿಗಂಬರ ಜೈನ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮರೋಡಿಯ ಮೋಹನ್ ಪೂಜಾರಿ ರವರು 100 ಮೀಟರ್ ಓಟ, ಉದ್ದ ಜಿಗಿತ, ಚಕ್ರ ಎಸೆತ ಮತ್ತು 4*100 ಮೀಟರ್ ರಿಲೇ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮುಂದಿನ ತಿಂಗಳು ನಡೆಯಲಿರುವ ರಾಜ್ಯಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಲಿದ್ದಾರೆ.