21 C
ಪುತ್ತೂರು, ಬೆಳ್ತಂಗಡಿ
March 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

ರೆಖ್ಯ: ಇಲ್ಲಿಯ ಗ್ರಾಮೀಣ ಪ್ರದೇಶವಾದ ನೇಲ್ಯಡ್ಕದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಶಾಲಾ ಕಚೇರಿಯ ಬಳಕೆಗೆ ಒಂದು ಕಪಾಟನ್ನು ಕೊಡುಗೆಯಾಗಿ ನೀಡಲಾಯಿತು.

ಬ್ಯಾಂಕ್ ಆಫ್ ಬರೋಡಾದ ಉದನೆ ಶಾಖೆಯ ಮ್ಯಾನೇಜರ್ ನಿತಿನ್ ಕೃಷ್ಣ ಅವರು ಕಪಾಟನ್ನು ಹಾಗೂ ನೇರಳೆ ಹಣ್ಣಿನ ಗಿಡವನ್ನು ಪ್ರೌಢಶಾಲೆಗೆ ಹಸ್ತಾಂತರಿಸಿ ಶುಭ ಹಾರೈಸಿದರು. ಸಂಸ್ಥೆಯ ಕೋರಿಕೆಯನ್ನು ಪರಿಗಣಿಸಿ ಪ್ರೌಢ ಶಾಲೆಗೆ ಕೊಡುಗೆಯನ್ನು ನೀಡಿದ ಬ್ಯಾಂಕಿಗೆ ಶಾಲಾ ಮುಖ್ಯೋಪಾಧ್ಯಾಯ ರಾಜೇಂದ್ರ ಕೃಷ್ಣ ಧನ್ಯವಾದಗಳನ್ನು ಸಲ್ಲಿಸಿದರು.

ಬ್ಯಾಂಕಿನ ಹಿರಿಯ ಅಧಿಕಾರಿ ಪೌಲೌಸ್ ಪಿ.ಸಿ. , ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉದಯಕುಮಾರ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಅರವಿಂದ ಗೋಖಲೆ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ವಿಜಯಕುಮಾರ್ ವಂದಿಸಿದರು.

Related posts

ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya
error: Content is protected !!