ಬೆಳ್ತಂಗಡಿ: ಉಪ್ಪಿನಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತಿ ಸ್ಪರ್ಧಿಗಳ ವಿರುದ್ಧವಾಗಿ ಸ್ಪರ್ಧಿಸಿದ ಕೆ.ವಿ ಪ್ರಸಾದ್ ರವರು ಪಕ್ಷ ವಿರೋಧಿ ಚಟುವಟಿಕೆಯನ್ನು ನಡೆಸಿದ್ದು ಈ ಕಾರಣದಿಂದ ಭಾರತೀಯ ಜನತಾ ಪಾರ್ಟಿಯಿಂದ ಮುಂದಿನ 6ವರ್ಷಗಳ ಅವಧಿಗೆ ಪ್ರಾಥಮಿಕ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾಗೊಳಿಸುತ್ತಿದ್ದೇವೆ ಎಂದು ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ತಿಳಿಸಿದ್ದಾರೆ.
