ಬೆಳ್ತಂಗಡಿ: ಸರಕಾರಿ ಪ್ರೌಢಶಾಲೆ ಬೆಳ್ತಂಗಡಿಯಲ್ಲಿ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗಾಗಿ ವ್ಯಕ್ತಿತ್ವ ವಿಕಸನ ತರಬೇತಿ ಇತ್ತೀಚೆಗೆ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಪ್ರಖ್ಯಾತ ರಂಗಕರ್ಮಿ ಶ್ರೀ ಶೀನನಾಡೋಳಿ ಶಿಬಿರವನ್ನು ನಡೆಸಿಕೊಟ್ಟರು. ವಿದ್ಯಾರ್ಥಿಗಳು ತಮ್ಮನ್ನು ತಾವು ತಿಳಿದುಕೊಳ್ಳಲು ವೇದಿಕೆಯಲ್ಲಿ ಯಾವುದೇ ಕಾರ್ಯಕ್ರಮವನ್ನು ಹಿಂಜರಿಕೆಯಿಲ್ಲದೆ ನಡೆಸಿಕೊಡಲು ಸಾಧ್ಯವಾಗುವ ಅನೇಕ ಚಟುವಟಿಕೆಗಳನ್ನು ಮಾಡಿಸಿದರು. ಎಲ್ಲ ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ಭಾಗವಹಿಸಿ ಶಿಬಿರದ ಪೂರ್ಣ ಉಪಯೋಗವನ್ನು ಪಡೆದುಕೊಂಡರು.