ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ವಿ.ಜೆ. ಮಾ. 24 ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಬೆಳ್ತಂಗಡಿ ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿದ್ದ ಅವರು ಪದ್ನೋತಿ ಹೊಂದಿ ವೇಣೂರು ಠಾಣೆಗೆ ವರ್ಗವಾಣೆಗೊಂಡಿದ್ದಾರೆ. ಇವರು 28 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದು, ಕಡಬ, ಪಣಂಬೂರು ಅಪಾರದ ಪತ್ತೆ ವಿಭಾಗ, ಧರ್ಮಸ್ಥಳ, ಸುರತ್ಕಲ್, ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿ, ಕಳೆದ ಮೂರು ವರ್ಷಗಳಿಂದ ಬೆಳ್ತಂಗಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.