25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಒಂದು ವಾರದ ಬೇಸಿಗೆ ಶಿಬಿರ ‘ಅಭಿವ್ಯಕ್ತಿಧಾರೆ 2025 ವಿದ್ಯಾರ್ಥಿ ಕಲರವ’ ಮಾ.22 ರಂದು ಉದ್ಘಾಟನೆಗೊಂಡಿತು.

ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಪ್ರತಿಭೆಗೆ ಬೇಸಿಗೆ ಶಿಬಿರ ಒಂದು ವೇದಿಕೆ ಎಂದರು.ಕೇವಲ ಪಾಠ ಮಾತ್ರವಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಅಗತ್ಯ ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ, ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಕಾಗದದ ಹೂವನ್ನು ಅರಳಿಸುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಬಳಿಕ ಅವರು, ‘ಸೃಜನಶೀಲ ಅಭಿವ್ಯಕ್ತಿ’ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಕೆ., ಶಿಬಿರದ ಪೂರ್ಣ ಪ್ರಮಾಣದ ಪ್ರಯೋಜನ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಕೆ. ಮಾತನಾಡಿದರು.

ವಿದ್ಯಾರ್ಥಿಗಳಾದ ಧನಲಕ್ಷ್ಮೀ ಮತ್ತು ಶಾಂಭವಿ ಪ್ರಾರ್ಥಿಸಿದರು. ಶಿಕ್ಷಕರಾದ ಶ್ರೀರಾಮ್ ಸ್ವಾಗತಿಸಿ, ಜ್ಞಾನೇಶ್ ವಂದಿಸಿದರು. ಶಿಕ್ಷಕಿ ತ್ರಿವೇಣಿ ಮತ್ತು ವಿದ್ಯಾರ್ಥಿನಿ ಅಂಕಿತ ಕಾರ್ಯಕ್ರಮ ನಿರೂಪಿಸಿದರು.

Related posts

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya
error: Content is protected !!