ಬೆಳ್ತಂಗಡಿ: ಭಾರತದ ನಾಗಾಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ ಇವರಿಗೆ ಭಕ್ತಿಪೂರ್ವಕ ಗೌರವಾಭಿನಂದನೆ ಮಹಾಭಿವಂದ್ಯ ಎ.12 ರಂದು ಅಳದಂಗಡಿ ಸತ್ಯದೇವತಾ ವಠಾರದಲ್ಲಿ ನಡೆಯಲಿದೆ ಎಂದು ಹನುಮೋತ್ಸವ ಸಮಿತಿ ಅಧ್ಯಕ್ಷ ಸಂಪತ್ ಬಿ ಸುವರ್ಣ ತಿಳಿಸಿದ್ದಾರೆ.
ದೀಪ ಪ್ರಜ್ವಲನೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ನೆರವೇರಿಸಲಿದ್ದಾರೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಧಾರ್ಮಿಕ ಉಪನ್ಯಾಸಕ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದ.ಕ ಸಂಸದರು ಕ್ಯಾ.ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ಮಾಜಿ ಶಾಸಕ ಪ್ರಭಾಕರ ಬಂಗೇರ,ಗುಜರಾತ್ ತುಳುಕೂಟ ಅಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ,ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನದ ಆಡಳಿತ ಮೊಕ್ತೇಸರಾದ ಶಿವಪ್ರಸಾದ್ ಅಜಿಲ,ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್, ಎಕ್ಸೆಲ್ ಕಾಲೇಜು ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಪತ್ ಬಿ ಸುವರ್ಣ ತಿಳಿಸಿದರು.