September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.12: ಅಳದಂಗಡಿ ಹನುಮೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರಿಗೆ “ಮಹಾಭಿವಂದ್ಯ” ಗೌರವಾಭಿನಂದನೆ

ಬೆಳ್ತಂಗಡಿ: ಭಾರತದ ನಾಗಾಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ ಇವರಿಗೆ ಭಕ್ತಿಪೂರ್ವಕ ಗೌರವಾಭಿನಂದನೆ ಮಹಾಭಿವಂದ್ಯ ಎ.12 ರಂದು ಅಳದಂಗಡಿ ಸತ್ಯದೇವತಾ ವಠಾರದಲ್ಲಿ ನಡೆಯಲಿದೆ ಎಂದು ಹನುಮೋತ್ಸವ ಸಮಿತಿ ಅಧ್ಯಕ್ಷ ಸಂಪತ್ ಬಿ ಸುವರ್ಣ ತಿಳಿಸಿದ್ದಾರೆ.

ದೀಪ ಪ್ರಜ್ವಲನೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ನೆರವೇರಿಸಲಿದ್ದಾರೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಧಾರ್ಮಿಕ ಉಪನ್ಯಾಸಕ ನೀಡಲಿದ್ದಾರೆ‌.

ಮುಖ್ಯ ಅತಿಥಿಗಳಾಗಿ ದ.ಕ ಸಂಸದರು ಕ್ಯಾ.ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ಮಾಜಿ ಶಾಸಕ ಪ್ರಭಾಕರ ಬಂಗೇರ,ಗುಜರಾತ್ ತುಳುಕೂಟ ಅಧ್ಯಕ್ಷ ಶಶಿಧ‌ರ್ ಶೆಟ್ಟಿ ನವಶಕ್ತಿ,ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನದ ಆಡಳಿತ ಮೊಕ್ತೇಸರಾದ ಶಿವಪ್ರಸಾದ್ ಅಜಿಲ,ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಸಂಚಾಲಕ ಮೋಹನ್ ಕುಮಾರ್, ಎಕ್ಸೆಲ್ ಕಾಲೇಜು ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಪತ್ ಬಿ ಸುವರ್ಣ ತಿಳಿಸಿದರು.

Related posts

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

Suddi Udaya

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಕ್ಷೇತ್ರದ ಧುರೀಣ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರಿಗೆ ಸನ್ಮಾನ

Suddi Udaya

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಶ್ರೀ ಧ.ಮಂ.ಭಜನಾ ಪರಿಷತ್ ಬೆಳ್ತಂಗಡಿ ವಲಯದ ಕಾರ್ಯದರ್ಶಿಯಾಗಿ ಸೂರಜ್ ಮೇಲಂತಬೆಟ್ಟು ಆಯ್ಕೆ

Suddi Udaya

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya
error: Content is protected !!