ತೆಕ್ಕಾರು: ತೆಕ್ಕಾರು ಭಟ್ರಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಅನ್ನದಾನ ಸೇವೆಯ ಕರಪತ್ರವನ್ನು ಮಾ.25 ರಂದು ಬಿಡುಗಡೆಗೊಳಿಸಲಾಯಿತು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ತುಕರಾಮ್ ನಾಯಕ್ ನಾಗರಕೋಡಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಲಕ್ಷ್ಮಣ್ ಭಟ್ರಬೈಲು ಹಾಗೂ ವಿವಿಧ ಸಮಿತಿ ಸದಸ್ಯರು ಹಾಜರಿದ್ದರು.