23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಸಂದರ್ಶನ ಕೌಶಲ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ಮಾ26 ರಂದು ನಡೆಸಲಾಯಿತು.


ಬಯಸಿದ ಉದ್ಯೋಗವನ್ನು ಪಡೆಯುವುದು ಪ್ರತಿಯೊಬ್ಬರ ಕನಸು. ಆದರೆ, ನಿರಂತರವಾಗಿ ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ಹೆಚ್ಚುತ್ತಿರುವ ಸ್ಪರ್ಧಾತ್ಪಕ ಜಗತ್ತಿನಲ್ಲಿ ಉದ್ಯೋಗ ಅವಕಾಶಗಳನ್ನು ಪಡೆಯಬೇಕಾದರೆ ಉತ್ತಮ ಜ್ಞಾನದೊಂದಿಗೆ ಸಂದರ್ಶನವನ್ನು ಎದುರಿಸುವ ಧೈರ್ಯ ,ಬುದ್ಧಿವಂತಿಕೆ ಜೊತೆಗೆ ಕೌಶಲ್ಯವು ಬೇಕು ಎಂಬ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಮುಂದಿನ ವೃತ್ತಿ ಜೀವನಕ್ಕೆ ತಯಾರಿಸುವ ಹಾಗೂ ಸಂದರ್ಶಗಳನ್ನು ಹೇಗೆ ಎದುರಿಸಬೇಕು ಎಂಬುವುದರ ಅರಿವು ಮೂಡಿಸುವ ಸಲುವಾಗಿ ‘ಸಂದರ್ಶನ ಕೌಶಲ್ಯ” ಕುರಿತು ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು.


ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಇವರು ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ.ಎ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ. ಎ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು.

Related posts

ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಕೃಷಿಕ ಡೀಕಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya
error: Content is protected !!